ಬ್ರ್ಯಾಂಡ್ ಬೆಂಗಳೂರು ಸಮ್ಮೇಳನ ಕಾರ್ಯಕ್ರಮ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್ಅವರು, ಬೆಂಗಳೂರು ಯಾವ ದಿಟ್ಟಿನಲ್ಲಿ ಬದಲಾವಣೆ ಆಗಬೇಕು ಅನ್ನೋ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 1.40 ಕೋಟಿ ಜನ ವಾಸ ಮಾಡುತ್ತಿದ್ದಾರೆ. ಪ್ರತಿವರ್ಷ 3 ಲಕ್ಷ ಹೊಸ ಕುಟುಂಬಗಳು ಸೇರ್ಪಡೆ ಆಗ್ತಿವೆ. ಕುಡಿಯುವ ನೀರಿನ ಬೇಡಿಕೆ ಕೂಡ ಜಾಸ್ತಿ ಆಗ್ತಾ ಇದೆ. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ತಜ್ಞರಿಂದ ಸಲಹೆ ಪಡೆದುಕೊಂಡಿದ್ದೇವೆ. ಎಲ್ಲಾ ವಲಯಗಳ ಎಂಟು ತಂಡಗಳನ್ನು ಮಾಡಿದ್ದೇವೆ. ಅವರಿಂದ ವರದಿ ಪಡೆದುಕೊಳ್ಳುತ್ತೇವೆ. ಬ್ರ್ಯಾಂಡ್ಬೆಂಗಳೂರು ಮಾಡುವುದಕಕೆ 70 ಸಾವಿರ ಜನರ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಆದರೆ, ಟ್ಯಾಕ್ಸ್ ಹೆಚ್ಚಳ ಮಾಡಲ್ಲ. ಆದರೆ, ಬೆಂಗಳೂರಿನ ಎಲ್ಲಾ ಸ್ವತ್ತುಗಳನ್ನು ಮರು ಸಮೀಕ್ಷೆ ಮಾಡಿ ಸೋರಿಕೆ ಆಗುವುದನ್ನು ಸರಿಪಡಿಸುತ್ತೇವೆ. ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡುತ್ತಿದ್ದೇವೆ. ಜೊತೆಗೆ, ಟ್ರಾಫಿಕ್ ಸಮಸ್ಯೆ ತಗ್ಗಿಸಲು ಹಣ ಜಾಸ್ತಿಯಾಗುತ್ತಿದ್ದು, ಮೆಟ್ರೋ ಹಾಗೂ ಟನಲ್ ನಿರ್ಮಾಣ ಪರಿಹಾರವಾಗಲಿದೆ. ರಾಜಕಾಲುವೆ ವಿಚಾರದಲ್ಲಿ ಬಿಬಿಎಂಪಿ ಫ್ರೀ ಹ್ಯಾಂಡ್ ಕೊಟ್ಟಿದ್ದೇನೆ. ಐಟಿ ಕಾರಿಡಾರ್ನಲ್ಲಿ ಮತ್ತೆ ಸಮಸ್ಯೆ ಆಗಬಾರದು ಎಂದು ಸೂಚಿಸಲಾಗಿದೆ ಎಂದರು.