ಕಂಪನಿ ಕಳೆದ ವರ್ಷ ನವೆಂಬರ್‌ನಲ್ಲಿ ತನ್ನ ಸುಮಾರು 10,000 ಉದ್ಯೋಗಿಗಳನ್ನು ವಜಾ ಮಾಡುವುದಾಗಿ ತಿಳಿಸಿತ್ತು. ಆದರೆ ಈ ಹಿಂದೆ ಯೋಜಿಸಿದಕ್ಕಿಂತಲೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗುತ್ತಿದೆ.ಅನಿಶ್ಚಿತ ಆರ್ಥಿಕತೆ ಹಾಗೂ ಕೋವಿಡ್ ಸಂದರ್ಭದಲ್ಲಿ ವಿತರಕರ ಬೇಡಿಕೆ ಹೆಚ್ಚಿದ್ದರಿಂದ ಅಧಿಕ ನೇಮಕಾತಿ ಅಂಶವನ್ನು ಉಲ್ಲೇಖಿಸಿ ಅಮೆಜಾನ್ ಉದ್ಯೋಗಿಗಳ ವಜಾ ನಿರ್ಧಾರವನ್ನು ಕೈಗೊಂಡಿದೆ. ನವೆಂಬರ್‌ನಲ್ಲಿ ಮಾಡಿಕೊಂಡಿದ್ದ ಕಡತವನ್ನು ಇಂದು ನಾವು ಹಂಚಿಕೊಳ್ಳುತ್ತಿದ್ದೇವೆ, ಕಂಪನಿಯಿಂದ 18,000 ಉದ್ಯೋಗಿಗಳನ್ನು ತೆಗೆದುಹಾಕುತ್ತಿದ್ದೇವೆ ಎಂದು ಸಿಇಒ ಆಂಡಿ ಜಾಸ್ಸಿ ಬುಧವಾರ ತಿಳಿಸಿರುವುದಾಗಿ ವರದಿಯಾಗಿದೆ. ಉದ್ಯೋಗಿಗಳನ್ನು ತೆಗೆದುಹಾಕುತ್ತಿರುವ ನಿರ್ಧಾರ ಅವರನ್ನು ಕಷ್ಟಕ್ಕೆ ದೂಡುತ್ತದೆ ಎಂಬುದು ನಮಗೆ ತಿಳಿದಿದೆ. ಆದರೆ ನಾವು ಈ ಪ್ರಕ್ರಿಯೆಯನ್ನು ಲಘುವಾಗಿ ತಗೆದುಕೊಳ್ಳುತ್ತಿಲ್ಲ. ಅವರಿಗೆ ಪ್ರತ್ಯೇಕ ಪಾವತಿ, ಆರೋಗ್ಯ ವಿಮೆಯ ಪ್ರಯೋಜನಗಳು, ಬಾಹ್ಯ ಉದ್ಯೋಗ ನಿಯೋಜನೆಗೆ ಬೆಂಬಲ ನೀಡುವ ಪ್ಯಾಕೇಜ್ ಅನ್ನು ಒದಗಿಸುವುದಾಗಿ ಜಾಸ್ಸಿ ಭರವಸೆ ನೀಡಿದ್ದಾರೆ.ವಜಾಗೊಳ್ಳುತ್ತಿರುವ ಹೆಚ್ಚಿನ ಉದ್ಯೋಗಿಗಳು ಯುರೋಪ್‌ನವರಾಗಿದ್ದಾರೆ.