HSRP ನಂಬರ್ ಪ್ಲೇಟ್ ಅಳವಡಿಕೆ, ಮತ್ತೆ ವಿಸ್ತರಣೆ ಘೋಷಿಸಿದ ಸಚಿವ ರಾಮಲಿಂಗಾ ರೆಡ್ಡಿವಾಹನ ಸವಾರರಿಗೆ ಕೂಡ ಕೊಂಚ ನಿರಾಳ

ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಂದರೆ ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆ ಮಾಡ್ತೀವಿ ಎಂದು ಮಧು ಮಾದೇಗೌಡ ಪ್ರಶ್ನೆಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದ್ದಾರೆ.ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದರು. ಅದರಂತೆ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ.ಹೀಗಾಗಿ ವಾಹನ ಸವಾರರಿಗೆ ಕೂಡ ಕೊಂಚ ನಿರಾಳವಾಗಿದೆ.

Leave a Reply

Your email address will not be published. Required fields are marked *