IAFನ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಗ್ರ್ಯಾಂಡ್ ಎಂಟ್ರಿ

ಪ್ರಧಾನಿ ನರೇಂದ್ರ ಮೋದಿ ಅವರು IAFನ ವಿಶೇಷ ವಿಮಾನದಲ್ಲಿಇಂದು ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಲ್ಲೇ ಹಾಕಿ ಪುಸ್ತಕ ನೀಡಿ ಸ್ವಾಗತ ಕೋರಿದರು.ಪ್ರಧಾನಿ ನರೇಂದ್ರ ಮೋದಿ ನೋಡಲು ಮೆಖ್ರಿ ಸರ್ಕಲ್​ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಾಮಾಯಿಸಿದ್ದು, ಜೈ ಜೈ ಮೋದಿ. ಜೈ ಶ್ರೀರಾಮ್ ಚಂದ್ರ ಕಿ ಜೈ ಅಂತಾ ಕಾರ್ಯಕರ್ತರು ಜೈಕಾರ ಹಾಕಿದರು. ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಬಿಜೆಪಿ ಮಹಿಳಾ ಮಣಿಗಳು ಸಹ ಆಗಮಿಸಿದ್ರು. ಅವರೆಲ್ಲರೂ ಕೇಸರಿ ಸೀರೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿದೆ.
.

Leave a Reply

Your email address will not be published.