IPL 2024: ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಆಘಾತ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೆಣೆಸಲು ಸಜ್ಜಾಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಘಾತ ಎದುರಾಗಿದೆ. ಪ್ರಮುಖ ಬೌಲರ್ ಆರಂಭದ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.ಕಳೆದ ಐಪಿಎಲ್ ಆವೃತ್ತಿಯಲ್ಲಿ ಸಿಎಸ್‌ಕೆ ತಂಡದ ಪ್ರಮುಖ ಅಸ್ತ್ರವಾಗಿದ್ದ ಶ್ರೀಲಂಕಾದ ಯುವ ವೇಗದ ಬೌಲರ್ ಮತೀಶ್ ಪತಿರಣ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಉದ್ಘಾಟನಾ ಪಂದ್ಯಕ್ಕೆ ಮಾತ್ರವಲ್ಲದೆ ಸಿಎಸ್‌ಕೆ ತಂಡದ ಆರಂಭದ ಕೆಲವು ಪಂದ್ಯಗಳಿಗೆ ಅವರು ಅಲಭ್ಯರಾಗಲಿದ್ದಾರೆ.

Leave a Reply

Your email address will not be published. Required fields are marked *