ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್ಪುಟ್ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್ಪುಟ್ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.