ಇಂದು ಇಬ್ಬರು ಲೋಕಸಭಾ ಗ್ಯಾಲರಿಯಿಂದ ಕಲಾಪ ನಡೆಯುವ ವೇಳೆ ಮೇಲಿನಿಂದ ಜಿಗಿದು ಸ್ಮೋಕ್ಬಾಂಬ್ಸಿಡಿಸಿದ್ದರು. ಈ ಘಟನೆಯಿಂದ ಎಚ್ಚೆತ್ತು ಬಿರ್ಲಾ ಅವರು ವೀಕ್ಷಕರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಒಳ ನುಗ್ಗಿದ ಇಬ್ಬರನ್ನು ಬಂಧಿಸಲಾಗಿದೆ ಮತ್ತು ಅವರ ಬಳಿಯಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊರಗಡೆ ಪ್ರತಿಭಟನೆ ನಡೆಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಓಂ ಬಿರ್ಲಾ ಹೇಳಿದ್ದಾರೆ.ಸಂಸತ್ಒಳ ಪ್ರವೇಶಕ್ಕೆ ಪಾಸ್ಇಲ್ಲದೇ ಯಾರನ್ನು ಬಿಡಲ್ಲ. ಮೂರು ಹಂತದಲ್ಲಿ ತಪಾಸಣೆ ಮಾಡಿಯೇ ಬಿಡಲಾಗುತ್ತದೆ. ಪೆನ್, ಪುಸ್ತಕ, ನಾಣ್ಯ ಸೇರಿದಂತೆ ಯಾವುದನ್ನು ತೆಗೆದುಕೊಂಡು ಹೋಗುವಂತಿಲ್ಲ. ಕಲಾಪ ವರದಿ ಮಾಡುವ ಪತ್ರಕರ್ತರು ಮೊಬೈಲನ್ನು ಒಳಗಡೆ ತೆಗೆದುಕೊಂಡು ಹೋಗುವಂತಿಲ್ಲ. ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ತಪಾಸಣೆ ನಡೆಯುವಾಗ ಅವರು ಕಲರ್ಸ್ಮೋಕ್ತೆಗೆದುಕೊಂಡು ಹೋಗಿದ್ದು ಹೇಗೆ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಸಂಸತ್ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈ ದೀನವೇ ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದೆ.